ಕಾರವಾರ: 2022-23ನೇ ಸಾಲಿನಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಸಮುದಾಯದ ಯುವಕ-ಯುವತಿಯರಿಗೆ ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ, ಕಾಪಿ ಎಡಿಟರ್, ಬುಲೆಟಿಂಗ್ ಪ್ರೊಡ್ಯೂಸರ್ ತರಬೇತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ತರಬೇತಿಯನ್ನು ಕೇಂದ್ರ ಸ್ಥಾನ ಬೆಂಗಳೂರನಲ್ಲಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಉತ್ತರಕನ್ನಡ ಜಿಲ್ಲೆ, ಕಾರವಾರ ಇಲ್ಲಿ ಎಲ್ಲ ದಾಖಲಾತಿಗಳೊಂದಿಗೆ ದ್ವಿ ಪ್ರತಿಯಲ್ಲಿ (02 ಪ್ರತಿ) ಆಗಸ್ಟ್ 10ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ: 08382-226903 ಗೆ ಅಥವಾ dmkarwar@ rediffmail.com ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment