ಕಾರವಾರ: 2022-23 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ
ಜೆ.ಆರ್.ಎಫ್ ಮಾದರಿಯಲ್ಲಿ ಪಿ.ಎಚ್.ಡಿ 3ವರ್ಷ ಹಾಗೂ ಎಂ.ಫಿಲ್ 2 ವರ್ಷ ಅವಧಿಗೆ ಎಂ.ಫಿಲ್ ವಿದ್ಯಾರ್ಥಿಗಳಿಗೆ ಮಾಸಿಕ 8,000 ರೂ ಮತ್ತು ಪಿ.ಎಚ್.ಡಿಗೆ ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ದಂತೆ ವ್ಯಾಸಂಗ ವೇತನ, ಫೆಲೋಶಿಪ್‌ಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇಲಾಖಾ ಸೇವಾಸಿಂಧು ತಂತ್ರಾಂಶದಲ್ಲಿ ಆ 16 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ದೂರವಾಣಿ ಸಂಖ್ಯೆ 827779990, 08382-220336 ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ
ವೆಬ್‌ಸೈಟ್ https://dom.karnataka.gov.in/ut tara_kannada/public/, Twitter-Id: @ WelfareUttara ಅಥವಾ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ, ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, ತಾಲೂಕಾ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಎಲ್ಲ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಿ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
Leave a Comment