ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮುಂಡಗೋಡ ತಾಲೂಕಿನ ಗುಂಜಾವತಿ (ಪವರ್ಗ2ಬಿ), ಯಲ್ಲಾಪುರ ತಾಲೂಕಿನ ಇಡಗುಂದಿ (ಸಾಮಾನ್ಯ ಮಹಿಳಾ ಅಭ್ಯರ್ಥಿ), ಕಾರವಾರ ತಾಲೂಕಿನ ಹೊಟೆಗಾಳಿ (ಪರಿಶಿಷ್ಟ ಜಾತಿ ಅಂಗವಿಕಲ ಅಭ್ಯರ್ಥಿ), ಹಳಿಯಾಳ ತಾಲೂಕಿನ ಸಾಂಬಾಣಿ (ಸಾಮಾನ್ಯ ಮಾಜಿ ಸೈನಿಕ), ಅಂಕೋಲಾ ತಾಲೂಕಿನ ಬೆಳಂಬಾರ (ಸಾಮಾನ್ಯ ಅಭ್ಯರ್ಥಿ) ಕಾರ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಕೊಳ್ಳಲಾಗುತ್ತಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು,
ಇಲಾಖೆ ಹೆಸರು : ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ
ಹುದ್ದೆಗಳ ಹೆಸರು : ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು : 05
ವಿದ್ಯಾರ್ಹತೆ :
ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಲಯ ಮೇಲ್ವಿಚಾರಕ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ/ಬೋರ್ಡ್ನಿAದ ಕಡ್ಡಾಯವಾಗಿ 10 ನೇ ತರಗತಿ / SSLC ಪಾಸಾಗಿರಬೇಕು.
ಅಭ್ಯರ್ಥಿಯ ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಿದ ಮೀಸಲಾತಿಗೆ ಬಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು ಗ್ರಾಂಥಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ :
ಅಭ್ಯರ್ಥಿಯು 18 ವರ್ಷ ವಯಸ್ಸದನ್ನು ಪೂರೈಸಿರಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಅರ್ಜಿ ಶುಲ್ಕ :
ಜಿಲ್ಲೆಯ ಗ್ರಾಮ ಪಂಚಾಯತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ ದೂರವಾಣಿ ಸಂಖ್ಯೆ 08382-226564/[email protected] ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :09/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/08/2022
Leave a Comment