ಕಾರವಾರ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯೋರ್ವನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಡಿಯ ತ್ವರಿತ ವಿಚಾರಣೆಯ ವಿಶೆಷ ನ್ಯಾಯಾಲಯ (ಎಫ್‌ಟಿಎಸ್‌ಸಿ) 20 ವರ್ಷ ಜೈಲು ಹಾಗೂ 1.20 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಮುಂಡಗೋಡದ ಓರಲಗಿಯ 60 ವರ್ಷದ ಶಿವಾನಂದ ಗೌಳೇರ ಶಿಕ್ಷೆಗೊಳಗಾದ ಆರೋಪಿ. ಅಪ್ರಾಪ್ತ ಬಾಲಕಿಯನ್ನು ಮನೆಗೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ 2021ರ ಸೆ. 16 ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬAಧ ತನಿಖೆ ನಡೆಸಿದ್ದ ಸಿಪಿಐ ಸಿದ್ದಪ್ಪ ಸಿಮಾನಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಅದರಂತೆ ಸಿದೀರ್ಘ ವಿಚಾರಣೆ ಬಳಿಕ ನ್ಯಾಯಾಧೀಶ ಶಿವಾಜಿ ನಲವಾಡೆ ಅವರು ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸರ್ಕಾರಿ ವಕೀಲರಾದ ಶುಭಾ ಆರ್. ಗಾಂವಕರ್ ವಾದ ಮಂಡಿಸಿದ್ದರು.
Leave a Comment