ಬೆಂಗಳೂರು : ರಾಜ್ಯದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರೀ ಮಳೆ ಸುರಿಯಲ್ಲಿದ್ದು, ಆ. 6 ರಂದು ಅತ್ಯಧಿಕ ಮಳೆ ಆಗುವ ಸಂಭವವಿದೆ. ಹೀಗಾಗಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.
ಆ. 6 ರಂದು ಉಡಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಂಗಳೂರು, ಕೊಡುಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ನಿರಂತರವಾಗಿ ಮಳೆ ಅಬ್ಬರಿಸಲಿದೆ. ಈ ಜಿಲ್ಲೆಗಳಲ್ಲಿ ಒಂದು ದಿನ ಸುಮಾರು 20 ಸೇಂ.ಮೀ. ಗಿಂತಲೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ರಾಜ್ಯದಲ್ಲಿ ಆ. 7 ರ ವರೆಗೆ ಭಾರೀ ಮಳೆ ಮುಂದುವರಿಯಲಿದೆ. ಈ ಮೂರು ದಿನ ಕರಾವಳಿ ಜಿಲ್ಲೆಗಳೂ ಒಳಗೊಂಡAತೆ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಒಂದು ದಿನ ಹಾಗೂ ಚಿಕ್ಕಿಮಗಳೂರು, ಕೊಡಗು, ಮಡಕೇರಿ ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಕೊಡಲಾಗಿದೆ.
ಇದೇ 3 ದಿನದ ಅವಧಿಯಲ್ಲಿ ನೀದರ್, ಬೆಳಗಾವಿ ಹಾವೇರಿ ಗದಗ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.
Leave a Comment