ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆ ಗಲ್ಲಿಗಳ ಸಾರ್ವಜನಿಕ ಗಜಾನನೋತ್ಸವಕ್ಕೆ ಈ ಬಾರಿ ಯಾವುದೇ ನಿರ್ಬಂಧ ಇಲ್ಲ ಎಂದು ಸರ್ಕಾರ ಹೇಳಿದೆ.
ಕೊರೊನಾ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೊನಾ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಲು ಸರ್ಕಾರ ಅಸ್ತು ಎಂದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಹೇಳಿದ್ದಾರೆ.
ಹಿಂದಿನ ವರ್ಷಗಳಂತೆಯೇ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಟರ್ ಆಫ್ ಪ್ಯಾರಿಸ್ ಇನ್ನಿತರ ವಸ್ತು ಬಳಸಿ ತಯಾರಿಸಿದ ಗಣೇಶ ವಿಗ್ರಹ ಕೂಡಿಸುವಂತಿಲ್ಲ ಎಂದಿದ್ದಾರೆ.
ಸಾಂಕ್ರಾಮಿಕ ರೋಗ ನಿಯಂತ್ರಿಸುವುದಕ್ಕಾಗಿ ಎರಡು ವರ್ಷ ನಿರ್ಬಂಧ ವಿಧಿಸಲಾಗಿತ್ತು. ಈ ಕ್ರಮದಿಂದ ಹಿಂದುಪರ ಸಂಘಟನೆಗಳು ಮತ್ತು ಸಮಿತಿಗಳಿಗೆ ನೋವಾಗಿದ್ದು, ಅದಕ್ಕಾಗಿ ಕ್ಷಮೆ ಕೇಳುತ್ತೇವೆ ಎಂದರು.
Leave a Comment