ರಾಷ್ಟçಧ್ವಜವನ್ನು ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಹಾರಾಟಕ್ಕೆ ತೊಂದರೆ ಇಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಮತ್ತು ಜೈಲು ಶಿಕ್ಷೆಶತಸಿದ್ದ. ಧ್ವಜ ಸಂಹಿತೆ ಪ್ರಕಾರ, ರಾಷ್ಟçಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸ್ ದಾಖಲಿಸಲು ಅವಕಾಶ ಇದೆ.
ಇದಕ್ಕೆ ಯಾರು ಅನುಮತಿಗೆ ಕಾಯಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶ ಇದೆ. ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ. 13 ರಿಂದ 15ರ ವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.
ಪ್ಲಾಸ್ಟಿಕ್ ಧ್ವಜ ಇಲ್ಲ, ವಾಹನಕ್ಕಿಲ್ಲ ಧ್ವಜ
ಎಲ್ಲಿಯೂ ಪ್ಲಾಸ್ಟಿಕ್ ಧ್ವಜ್ ಹಾರಾಟಕ್ಕೆ ಆವಕಾಶ ಇಲ್ಲ. ಅದೇ ರೀತಿ ಯಾವುದೇ ರೀತಿಯ ವಾಹನಗಳಲ್ಲೂ ಧ್ವಜ ಹಾರಾಟಕ್ಕೆ ಆಸ್ಪದ ಇಲ್ಲ. ಸರ್ಕಾರದ ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಬಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈ ಮಗ್ಗ, ಖಾದಿ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ. ಇಲ್ಲಿ ಪಾಲಿಸ್ಟರ್, ಖಾದಿ, ಕಾಟನ್ ಧ್ವಜ ನೀಡಲಾಗುತ್ತಿದೆ. ರಾಷ್ಟçಧ್ವಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದರಿAದ ಸ್ವಾತಂತ್ರೊö್ಯÃತ್ಸವದ ಅಮೃತೋತ್ಸವ ಸಂದರ್ಭ ರಾತ್ರಿಯೂ ಇಳಿಸದೆ ಧ್ವಜ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಡಾ. ಕುಮಾರ್ ಮಾಹಿತಿ ನೀಡಿದರು.
Leave a Comment