ಕಾರವಾರ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಹಾಗೂ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಪ್ರವರ್ಗ-3ಎದಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ ಗೌಡರ್, ನಾಮಧಾರಿ ಗೌಡ ಸಮುದಾಯದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಕುಂಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 98,000 ರೂ. ಹಾಗೂ ನಗರ ಪ್ರದೇಶದವರಿಗೆ 1,20,000 ರೂ. ಮಿತಿಯಲ್ಲಿರಬೇಕು. ವಯಸ್ಸು 18 ರಿಂದ 55ರೊಳಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಅರ್ಜಿಯನ್ನು ನಿಗಮದ :- https://kvcdc. karnataka.gov.in ನಿಂದ Download ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 18ರೊಳಗೆ, ಉತ್ತರ ಕನ್ನಡ ಜಿಲ್ಲೆಯ ಡಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ:-08382 223229ನ್ನು ಸಂಪರ್ಕಿಸುವಂತೆ ಕಾರವಾರದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment