ಚಾಮರಾಜನಗರ : ಕಾಲೇಜಿನ ಉಪನ್ಯಾಸಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜ ನಗರದಲ್ಲಿ ಸಂಭವಿಸಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್ ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇಂದು(ಆ.9) ಚಂದನಾ ಬರ್ಥ್ ಡೇ ಇನ್ನು ಡೆತ್ ನೋಟ್ ನಲ್ಲಿ, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Leave a Comment