ಮಿನಿ ಉದ್ಯೋಗ ಮೇಳ ಆ.20ರಂದು

ಕಾರವಾರ: ಇಲ್ಲಿನ ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಇದೇ ಕಛೇರಿಯಲ್ಲಿ ಆ.20ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮಿನಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕನಿಷ್ಟ 4 ರೆಸ್ಯೂಮ್ ಗಳ ಪ್ರತಿಯೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಈ ಕಛೇರಿ ಅಥವಾ ಕಛೇರಿ ದೂರವಾಣಿ ಸಂಖ್ಯೆ: 08382- 226 386, ಮೊಬೈಲ್ ಸಂಖ್ಯೆ: 83100 44796, 97433 60656 ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.