
ಯಲ್ಲಾಪುರ :ತಾಲೂಕಿನ ಭರತ ನಹಳ್ಳಿಯ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳುವಿಜ್ಞಾನ ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.
ಯಲ್ಲಾಪುರದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, , ಸಾರ್ವಜನಿಕ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್, ಸಿ.ವಿ. ರಾಮನ್ ವಿಜ್ಞಾನ ರಸ ಪ್ರಶ್ನೆ-2022ರ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾಲಯ ಭರತನಹಳ್ಳಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ
ಸಂದೀಪ ಸುರೇಶ ದೇವಾಡಿಗ ಹತ್ತನೇ ತರಗತಿ ಹಾಗೂ ಕುಮಾರ ಬಿ.ವಾಯ್. ನಂದನ ಒಂಬತ್ತನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ರಸಪ್ರಶ್ನೆಯ ಲಿಖಿತ ಸ್ಪರ್ಧೆ ಮತ್ತು ಮೌಖಿಕ ಸುತ್ತುಗಳಲ್ಲಿ ಅತೀ ಹೆಚ್ಚು ಅಂಕ ಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗ ದರ್ಶನ ಮಾಡಿದ್ದ ವಿಜ್ಞಾನ ಶಿಕ್ಷಕಿ ಭುವನೇಶ್ವರಿ ಡಿ.ಜೆ. ರವರನ್ನು ಸಂಸ್ಥೆಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರು, ಶಾಲೆಯ ಮಖ್ಯಾಧ್ಯಾಪಕರು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ .
Leave a Comment