ಯಲ್ಲಾಪುರ : ಪಟ್ಟಣದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಯ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನಾಗಿದ್ದ, ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ.
ಬ್ಯಾಂಕ್ ಸಿಬ್ಬಂದಿಗಳಾದ ಸಂಜೀವ ಭಟ್ಟ ಹಾಗೂ ನಾಗೇಂದ್ರ ನಾನಾಪುರ ಎಂಬುವವರ ಲಾಗಿನ್ ಅನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು, ಆಂಧ್ರದ ಚಿರಲಾದ ಎಸ್‌ಬಿಐನಲ್ಲಿ ಖಾತೆ ಹೊಂದಿರುವ ತನ್ನ ಪತ್ನಿ ರೇವತಿ ಗರ‍್ರೆಯ ಖಾತೆಗೆ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿ ಬ್ಯಾಂಕಿಗೆ ವಂಚನೆ ಮಾಡಿದ್ದಾನೆ.
ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ಪೊಲೀಸ್ ದೂರು ನೀಡಿದ್ದಾರೆ. ಆದರೆ ಸದ್ಯ ಆರೋಪಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸದ್ಯ ಖಾತೆಯಲ್ಲಿ ಹಣವಿಲ್ಲ : ಎಸ್ ಪಿ
ಕಾರವಾರ : ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದ ಸಹಾಯಕ ವ್ಯವಸ್ಥಾಪಕ ಕುಮಾರ್ ಬೋನಾಲ್ ಎನ್ನುವಾತ 2.69 ಕೋಟಿ ರೂ. ವರ್ಗಾಯಿಸಿದ್ದ ಆತನ ಪತ್ನಿಯ ಎಸ್‌ಬಿಐ ಖಾತೆಯಲ್ಲಿ ಸದ್ಯ ಹಣವಿಲ್ಲ ಎನ್ನುವುದು ತನೀಖೆಯಲ್ಲಿ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಯಲ್ಲಾಪುರ ಬ್ಯಾಂಕ್ ಆಫ್ ಬರೋಡಾದಲ್ಲಿ ಆಂದ್ರಪ್ರದೇಶದ ಆನಂತಪುರ ಜಿಲ್ಲೆಯ ಕುಮಾರ್ ಬೋನಾಲ ಎನ್ನುವಾತ ಐದು ತಿಂಗಳ ಹಿಂದೆ ಅಸಿಸ್ಟಂಟ್ ಮ್ಯಾನೇಜರ್ ಆಗಿ ಸೇರ್ಪಡೆಗೊಂಡಿದ್ದ. ಸೇರ್ಪಡೆಗೊಂಡಾಗಿನಿAದ ಸೆ. 5 ರವರೆಗೆ ಬ್ಯಾಂಕ್ ನ ಸಿಬ್ಬಂದಿಗಳ ಲಾಗಿನ್ ಮೂಲಕ ಕರೆಂಟ್ ಅಕೌಂಟ್‌ನಿAದ ತನ್ನ ಪತ್ನಿಯ ಹೆಸರಿನ ಖಾತೆಗೆ ಆರೋಪಿ ಹಣವನ್ನ ವರ್ಗಾಯಿಸಿಕೊಂಡಿದ್ದಾನೆ.
ಈ ಬಗ್ಗೆ ವಾರದ ಬಳಿಕ ಬ್ಯಾಂಕ್ ನ ಇತರ ಅಧಿಕಾರಿಗಳಿಗೆ ಮಾಹಿತಿ ದೊರೆತು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ. ವಂಚನೆ ಪ್ರಕರಣ ದಾಖಲಾಗುವಕೆಲ ದಿನಗಳ ಹಿಂದೆ ಆರೋಪಿ ಕಾಣೆಯಾಗಿರುವ ಕುರಿತು ಕೂಡ ಪ್ರಕರಣ ದಾಖಲಾಗಿದೆ. ಸದ್ಯ ಆತ ಹಣ ವರ್ಗಾಯಿಸಿರುವ ಖಾತೆಯಲ್ಲಿ ಯಾವುದೇ ಹಣವಿಲ್ಲ. ನಮ್ಮ ತಂಡ ತನೀಖೆ ಮುಂದುವರಿಸಿದ್ದು, ಆರೋಪಿಯ ಬಂಧನದ ಬಳಿಕ ಹಣವನ್ನು ವರುಭರಣ ಮಾಡಿಸಿ ಕೊಳ್ಳಿಲಿದ್ದೇವೆ ಎಂದು ತಿಳಿಸಿದ್ದಾರೆ.
Leave a Comment