ಬೆಂಗಳೂರು : ಇಂಧನ ಹೊಂದಾಣೆಕೆಯ ಶುಲ್ಕವನ್ನು ಅಕ್ಟೋಬರ್ 1 ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯಚ್ಛಕ್ಕಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ.
ಈ ಆದೇಶದಿಂದಾಗಿ ವಿದ್ಯತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಪ್ರತಿ ಯೂನಿಟ್ ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್ – 34 ಪೈಸ್, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.
ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣೆಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಹೆಚ್ಚುವರಿ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ಈ ಶುಲ್ಕವನ್ನು ಆರು ತಿಂಗಳಿಗೆ ಅನ್ವಯಿಸುವಂತೆ ಪರಿಷ್ಕರಿಸಲಾಗಿದೆ.
ಕಳೆದ ಜುಲೈನಲ್ಲಿ ಇಂಧನ ಹೊಂದಾಣೆಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ 31 ಪೈಸೆಯಷ್ಟು ಬೆಸ್ಕಾಂಗೆ ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು.
ಇದೀಗ ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾದ ಹಿನ್ನಲೆಯಲ್ಲಿ 43 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಮೊತ್ತವನ್ನು ಅಕ್ಟೋಬರ್ ನಿಂದ ಮುಂದಿನ ಮಾರ್ಚ್ 2023 ರವರೆಗೆ ಸಂಗ್ರಹಿಸಿಸಲಾಗುತ್ತದೆ ಎಂದು ಆಯೋಗ ಹೆಳಿದೆ.
Leave a Comment