ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಎಸ್‌ಬಿಐ ಆಶಾ ಸ್ಕಾಲರ್‌ಶಿಪ್ (SBI Asha Scholarship 2022) ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆಗಳು ;
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು.
ಕಳೆದ ಶೈಕ್ಷಣಿಕ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆ ಇರಬೇಕು.
ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.
ಅಗತ್ಯವಿರುವ ದಾಖಲೆಗಳು ;
ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ. ( ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್)
ಪ್ರಸಕ್ತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/ಬನಫೈಡ್ ಪ್ರಮಾಣಪತ್ರ).
ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.
ಆದಾಯ ಪ್ರಮಾಣ ಪತ್ರ (ಫಾರ್ಮ್ 16A/ಆದಾಯ ಪ್ರಮಾಣಪತ್ರ/ ಪೇಸ್ಲಿಪ್)
ವಿದ್ಯಾರ್ಥಿಗಳ ಫೋಟೋ ಸಲ್ಲಿಸಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; 15-Oct-2022
apply link /ಅರ್ಜಿ ಸಲ್ಲಿಸಲು; https://www.buddy4study.com/page/sbi-asha-scholarship-program
web site ; https://www.sbifoundation.in/latest-news/190
Leave a Comment