ಆದಿತ್ಯ ಬಿರ್ಲಾ ಕ್ಯಾಪಿಟಲ್ ನಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಕೋವಿಡ್ (ಸ್ಕಾಲರ್‌ಶಿಪ್ ) ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
ಕೋವಿಡ್-19 ದಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಮುಂದುವರಿಸಲು ಅನುಕೂಲ ವಾಗುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿ ಮಾಡಿದೆ.
ಕೋವಿಡ್-19 ದಿಂದ ತಮ್ಮ ಪೋಷಕರನ್ನು ಕಳೆದುಕೊಂಡ ಒಂದನೇ ತರಗತಿಯಿಂದ ಪದವಿ ಪೂರ್ವದವರೆಗಿನ ವಿದ್ಯಾರ್ಥಿಗಳು ಇದಕ್ಕೆ ಅರ್ಹರು.
ವಿದ್ಯಾರ್ಥಿವೇತನದ ಮೊತ್ತ ;
1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ – INR 24,000 | 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ – INR 30,000
ಸಾಮಾನ್ಯ UG ಕೋರ್ಸ್‌ಗಳಿಗೆ – INR 36,000 | ವೃತ್ತಿಪರ UG ಕೋರ್ಸ್‌ಗಳಿಗೆ – INR 60,000
ಬೋಧನಾ ಶುಲ್ಕಗಳು, ಹಾಸ್ಟೆಲ್ ಶುಲ್ಕಗಳು, ಆಹಾರ, ಇಂಟರ್ನೆಟ್, ಸಾಧನ, ಪುಸ್ತಕಗಳು, ಲೇಖನ ಸಾಮಗ್ರಿಗಳು, ಆನ್‌ಲೈನ್ ಕಲಿಕೆ ಇತ್ಯಾದಿಗಳನ್ನು ಒಳಗೊಂಡಿರುವ ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಇದನ್ನು ಬಳಸಿಕೊಳ್ಳಬಹುದು.
ಅರ್ಹತೆ ;
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ INR 6 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
COVID-19 ಸಾಂಕ್ರಾಮಿಕ ರೋಗದಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ಭಾರತೀಯ ಪ್ರಜೆಗಳಿಗೆ ಮಾತ್ರ ತೆರೆದಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; 10-11-2022
Leave a Comment