ಅಲ್ಪಸಂಖ್ಯಾತ ಇಲಾಖೆಯಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಬಹದು,
ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; ವಿದ್ಯಾರ್ಥಿವೇತನ-scholarship/
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಯಾವುದೇ ಇಲಾಖೆಯ ಸರ್ಕಾರಿ ಅನುದಾನಿತ
ವಿದ್ಯಾರ್ಥಿನಿಲಯ ಹಾಗೂ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದೆ ಹಾಗೂ
ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
join our whatsapp group
ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ
ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಪ್ರತಿ ತಿಂಗಳಿಗೆ ರೂ.1,500/- ರಂತೆ
ಶೈಕ್ಷಣಿಕ ಅವಧಿಯ 10 ತಿಂಗಳಿಗೆ (ಅನುದಾನ ಲಭ್ಯತೆಯನುಸಾರ)ಒಟ್ಟು
ರೂ.15,000/- ಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್‍ಖಾತೆಗೆ ಆನ್‍ಲೈನ್
ಮುಖಾಂತರ ಜಮಾ ಮಾಡಲಾಗುವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಹತೆ;
ಆ) ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. (ಆ) ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ, ಅಲ್ಪಸಂಖ್ಯಾತರ
(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ ಮತ್ತು ವರ್ಸಿ) ಸಮುದಾಯಕ್ಕೆ ಸೇರಿರಬೇಕು, ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳ ಆಧೀನಕ್ಕೆ ಒಳಪಡುವ ಸರ್ಕಾರಿ/ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ ದೋಷಕರ ಕುಟುಂಬದ, ಒಟ್ಟು ವಾರ್ಷಿಕ ವರಮಾನ (Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
ಶೂಲ್ ಮಾಲಿ (ಮುಸ್ಲಿಂ), ಪರಿಶಿಷ್ಟ ಜಾತಿಯಿಂದ ಮತಾಂತರ ಹೊಂದಿದ ಕ್ರಿಶ್ಚಿಯನ್ನರು ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಇತರೆ ಉಪ ಜಾತಿಗಳು) ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ (ii) ಪ್ರವರ್ಗ-2ಎ, (ಬೌದ್ಧರು ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಇತರೆ ಉಪ ಜಾತಿಗಳು) ಪ್ರವರ್ಗ-2ಬಿ (ಮುಸ್ಲಿಂ) ಮತ್ತು 3ಬಿ (ಕ್ರಿಶ್ಚಿಯನ್, ಜೈನ್ (ದಿಗಂಬರ್) ವಿದ್ಯಾರ್ಥಿಗಳಿಗೆ ರೂ. 2.00 ಲಕ್ಷ
ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಟ 5 ಕಿ.ಮೀ ದೂರದವರಾಗಿರಬೇಕು. ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ ಪಟ್ಟಣಆಗಿದ್ದು, ಅವರು ಬೇರೆ ನಗರ/ ಪಟ್ಟಣದಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ.
ಈ ಯೋಜನೆಯಡಿ ಪ್ರಥಮ ಬಾರಿಗೆ ಸೌಲಭ್ಯವನ್ನು ಪಡೆಯಲು, ಈ ಹಿಂದಿನ
ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ನವೀಕರಣ ವಿದ್ಯಾರ್ಥಿಗಳು ಈ ಯೋಜನೆ ಸೌಲಭ್ಯಕ್ಕೆ ಅರ್ಹರಾಗಲು, ಅವರು ಈ
ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
(ಒಂದು ವೇಳೆ, ವೈದ್ಯಕೀಯ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ,
ಅಂತಹವರು, ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚುಭಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುವುದಿಲ್ಲ. (ಉದಾ: ಬಿ.ಎ ನಂತರ ಜಿ.ಕಾಂ ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್) ಬಿ.ಎಡ್ ನಂತರ ಎಲ್.ಎಲ್.ಬಿ ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ)
ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು,
ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟಿಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ
ಅರ್ಹರಿರುವುದಿಲ್ಲ.
ಕಲೆ, ವಿಜ್ಞಾನ, ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತೀರ್S/ಅನುತೀರ್ಣರಾದವರು ಆಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೆಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಆಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಭಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ. (ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು, ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
ಈ ಯೋಜನೆಯಡಿ ಸಹಾಯಧನ ಆಯಾ ವರ್ಷಕ್ಕೆ ಲಭ್ಯವಿರುವ ಅನುದಾನ ಹಾಗೂ ಭೌತಿಕ ಗುರಿಗೆ ತಕ್ಕಂತೆ ಸ್ವೀಕೃತವಾದ ಅರ್ಹ ಅರ್ಜಿಗಳಲ್ಲಿ ಹಿಂದಿನ ವರ್ಷದ ವಾರ್ಷಿಕ ಸೆಮಿಸ್ಟರ್ ತರಗತಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇಳಿಕೆ ಕ್ರಮಾನುಸಾರ.(ಅಭಿಟಿಜ AD ಡಿಡಿಜಜಲ) ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸುಗಳ ಆಧಾರದ ಮೇಲೆ ಮಂಜೂರು
ಮಾಡತಕ್ಕದ್ದು.
ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ಜಿಲ್ಲೆಯಲ್ಲಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು.
2015-16ನೇ ಸಾಲಿನಿಂದ ಈ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು, ಕಡ್ಡಾಯವಾಗಿ ಅವರ ಹೆಸರಿನಲ್ಲಿ ಆಧಾರ್ ಸಂಖ್ಯೆಯನ್ನು ಹೊಂದಿರತಕ್ಕದ್ದು. 7. ಮುಕ್ತ ವಿಶ್ವವಿದ್ಯಾಲಯ/ದೂರ ಶಿಕ್ಷಣ (ಆಂಟಿಜಜಟಿಛಿ ಆಂಧಿ ಕೋರ್ಸ್‌ಗಳಲ್ಲಿ ವ್ಯಾಸಂಗ
ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಸದರಿ ಯೋಜನೆಯಡಿ ತಪ್ಪು ಮಾಹಿತಿ ನೀಡಿ ಅಥವಾ ಸರ್ಕಾರಿ/ಖಾಸಗಿ (ಅನುದಾನಿತ) ವಸತಿ
ನಿಲಯಗಳಲ್ಲಿ ಪ್ರವೇಶ ಹೊಂದಿರುವ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆದಲ್ಲಿ ಕಾನೂನು ರೀತಿಯಲ್ಲಿ ಕ್ರಮಕೈಗೊಂಡು ಪಡೆದಿರುವ ಎಲ್ಲಾ ಮೊತ್ತವನ್ನು ಬಡ್ಡಿ ಸಮೇತ ವಸೂಲಿ ಮಾಡಲಾಗುವುದು,
ಹೆಚ್ಚಿನ ವಿದ್ಯಾರ್ಥಿ ವೇತನಕ್ಕಾಗಿ ಲಿಂಕ್ ಕ್ಲಿಕ್ ಮಾಡಿ ; https://canarabuzz.com/%e0%b2%ae%e0%b2%be%e0%b2%b9%e0%b2%bf%e0%b2%a4%e0%b2%bf/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%b5%e0%b3%86%e0%b3%95%e0%b2%a4%e0%b2%a8-scholarship/
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 15-11-2022 ರ ಸಂಜೆ 5.30 ಗಂಟೆಯೊಳ ಗೆ
ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು https://sevasindhu.karnataka.gov.in/
ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8277799990
ಇಲಾಖಾ Website; https://dom.karnataka.gov.in/
ಅಧಿಸೂಚನೆ /notification ;
ಆಸಕ್ತ ಅಲ್ಪಸಂಕ್ಯಾತರ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಮುಖಾಂತರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಹಾಗೂ ಇಲಾಖಾ ಅಧಿಕೃತ https://dom.krrnataka.gov.in/ ಸಂಪರ್ಕಿಸಬಹುದು.
Leave a Comment