ಕಾರವಾರ : 2022 – 23 ನೇ ಸಾಲಿನ ವಿದ್ಯಾಸಿರಿ ಯೋಜನೆ ಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಖ್) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಈಗ ಅರ್ಜಿ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡಲಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ;https://canarabuzz.com/2022/10/12/vidyasiri-scholarship-2022/
ದೂರವಾಣಿ ಸಂಖ್ಯೆ : 08382 – 220336, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ : 8277799990 ಗೆ ಸಂಪರ್ಕಿಸಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಸಿದ್ದಾರೆ.
Leave a Comment