ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಮಾರ್ಚ್ 2023 ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10.03,2023 ರಿಂದ 29.03.2023 ರವರೆಗೆ ನಡೆಸಲು ತೀರ್ಮಾನಿಸಿ, ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಆಕ್ಷೇಪಣೆಗಳನ್ನು ದಿನಾಂಕ 21.11.2022 ರಂದು ಸಂಜೆ 5.30 ರ ಒಳಗಾಗಿ [email protected] ಮೇಲ್‌ಗೆ ಮಾತ್ರ ಕಳುಹಿಸಬಹುದಾಗಿದೆ. ತದನಂತರ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
join our whatsapp group
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದ್ದು, ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯಲಿದೆ.
ಸುತ್ತೋಲೆ ವಿಷಯ : ಮಾರ್ಚ್ 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಶ್ನಿಸುವ ಕುರಿತು.
ಮಾರ್ಚ್ 2023 ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ODO 10.03.2023 ರಿಂದ 29.03.2023 ರವರೆಗೆ ನಡೆಸಲು ತೀರ್ಮಾನಿಸಿ, ತಾತ್ಕಾಲಿಕ ವೇಳಾಪಟ್ಟಿಯನ್ನು ಪಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದ್ದು, ಎಲ್ಲಾ ಕಾಲೇಜುಗಳ ಪ್ರಾಂಶುಪಾಲರುಗಳು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸುವುದು,
ಜಿಲ್ಲಾ ಉಪನಿರ್ದೇಶಕರುಗಳು ತಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರಾಂಶುಪಾಲರುಗಳಿಗೆ ಸದರಿ ತಾತ್ಕಾಲಿಕ ವೇಳಾಪಟ್ಟಿಯನ್ನು ಕಳುಹಿಸಿ ಸಂಬಂಧಿಸಿದ ಕಾಲೇಜುಗಳ ಸೂಚನಾ ಫಲಕದಲ್ಲಿ ಪ್ರಕಟಿಸಿ, ವ್ಯಾಪಕ ಪ್ರಚಾರ ನೀಡುವಂತೆ ಕ್ರಮಕೈಗೊಳ್ಳುವುದು, ಅದರಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಆಕ್ಷೇಪಣೆಗಳನ್ನು ದಿನಾಂಕ 21.11.2022 ರಂದು ಸಂಜೆ 5.30 ರ ಒಳಗಾಗಿ [email protected] ಮೇಲ್‌ಗೆ ಮಾತ್ರ ಸಲ್ಲಿಸಲು ಸೂಚಿಸುವುದು. ತದನಂತರ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
Leave a Comment