ಕಾರವಾರ: ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ಮತ್ತು ಇತರೆ ವರ್ಗದ ರೈತರಿಗೆ ಶೇ. 75 ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382 226602 ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು.
Leave a Comment