ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ಇವರ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ನ. 25ರ ಒಳಗೆ ಸಲ್ಲಿಸಲು ಸೂಚಿಸಿದ್ದಾರೆ.
ತರಬೇತಿಯೂ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ 08284 298547, 8050741744, 9632143217 ಗೆ ಎಂದು ಆರ್.ಸೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Leave a Comment