ಕಾರವಾರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.
ಈ ಜೇಷ್ಠತಾ ಪಟ್ಟಿಯಿಂದ ಬಾಧಿತರಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ನ. 5 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ನಂತರದಲ್ಲಿ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಕರ ಅರ್ಹತಾ ಪರೀಕ್ಷೆ ನ. 6ರಂದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟೂ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಪ್ರಾರಂಭವಾಗುವ ಮುನ್ನ 1 ತಾಸು ಮುಂಚಿತವಾಗಿ ಹಾಜರಿರಬೇಕು. ಆ ನಂತರದಲ್ಲಿ ಬರುವ ಯಾವದೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಎಲೆಕ್ಟ್ರಾನಿಕ್ಸ್ ಮೊಬೈಲ್, ಕ್ಯಾಲ್ಕುಲೇಟರ್, ಎಲೆಕ್ಟ್ರಾನಿಕ್ ವಾಚ್, ಮೈಕ್ರೋ ಫೋನ್, ಬ್ಲೂಟೂತ್ ಉಪಕರಣಗಳನ್ನು ತರುವಂತಿಲ್ಲ. ಅಲ್ಲದೆ ಶೂ ಮತ್ತು ಸಾಕ್ಸ್ ಧಾರಣೆಯನ್ನು ನಿಷೇಧಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
Leave a Comment