2500 ಶಿಕ್ಷಕರು, 778 ಉಪನಾಸಕರ ನೇಮಕಾತಿ ಶ್ರೀಘ್ರದಲ್ಲಿ
ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಲ್ಲಿ 2,500 ಪ್ರೌಢಶಾಲೆ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿಗೆ ಆರ್ಥಿಕ ಇಲಾಖೆ ಯಿಂದ ಹಸಿರುನಿಶಾನೆ ದೊರೆತಿದೆ.
ರಾಜ್ಯದ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜು ಗಳಲ್ಲಿ ಉಪನ್ಯಾಸಕರ ಕೊರತೆ ಇತ್ತು. ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು ಈಗ ಆ ಕೊರತೆ ನೀಗಲಿದೆ.
ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಯನ್ನು ಮುಂದಿನ ದಿನಗಳಲ್ಲಿ ಆರಂಭಿಸಲಾಗುವುದು.

ಪ್ರಸ್ತುತ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್‌ನಲ್ಲಿ ಪೂರ್ಣವಾಗಲಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
Leave a Comment