ಸರ್ಟಿಫಿಕೇಟ್ ಕೋರ್ಸ್‌ಗಳ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ಯಾರಾಮೆಡಿಕಲ್ ಸ್ಕಿಲ್ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳ ವಸತಿ ಸಹಿತ ತರಬೇತಿಗೆ ಅರ್ಜಿ ಆಹ್ವಾನಿಸಲಾದೆ.
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ www.sw.kar.nic. inನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯ ಸ್ಕಾö್ಯನ್ ಕಾಪಿಯನ್ನು ನ.15ರ ಸಂಜೆ 6 ಗಂಟೆಯ ಒಳಗೆ ಇ-ಮೇಲ್: [email protected]ಗೆ ಸಲ್ಲಿಸಬೇಕು. ಕಳುಹಿಸುವಲ್ಲಿ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ [email protected]. com ಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080- 2220 7784ಗೆ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment