Bank Strike/19ರಂದು ಬ್ಯಾಂಕ್ ಮುಷ್ಕರ
ನವದೆಹಲಿ: ಬ್ಯಾಂಕ್ ನೌಕರರ ಮುಷ್ಕರ ಮತ್ತೆ ಆರಂಭವಾಗಿವೆ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ) ನ.19 ರಂದು ಮುಷ್ಕರಕ್ಕೆ ಕರೆ ನೀಡಿದೆ.
ಎಐಬಿಇಎ ಪ್ರಧಾನ ಕಾರ್ಯದರ್ಶಿ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ಮುಷ್ಕರದ ನೋಟಿಸ್ ನೀಡಿರುವುದಾಗಿ ಬ್ಯಾಂಕ್ ಆಫ್ ಬರೋಡಾ ಹೇಳಿದೆ. ತಮ್ಮ ಸದಸ್ಯರು ಬೇಡಿಕೆಗಳ ಈಡೇರಿಕೆಗಾಗಿ ಬೆಂಬಲಿಸಿ 19.11.2022ರಂದು ಮುಷ್ಕರ ನಡೆಸಲು ಮುಂದಾಗಿದ್ದಾರೆ,” ಎಂದು ತಿಳಿಸಿದೆ.
ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ರುವವರನ್ನು ಗುರಿಯನ್ನಾಗಿ ಸಲಾಗುತ್ತಿದೆ ಎಂದು ಇತ್ತೀಚೆಗೆ ಎಐಬಿಇಎ ಪ್ರಧಾನ ಕಾರ್ಯದರ್ಶಿ c h ವೆಂಕಟಾಚಲಂ ಆರೋಪಿಸಿದ್ದರು ಎನ್ನುವುದು ಇಲ್ಲಿ ಉಲ್ಲೇಖನೀಯ. ಈ ಮುಷ್ಕರ ದಿಂದಾಗಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ
ಬೀರಬಹುದು ಎಂದು ಬ್ಯಾಂಕ್‌ಗಳು ತಿಳಿಸಿವೆ.
Leave a Comment