ಅಂಜುಮನ್ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ ಪದವಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಯಶಸ್ವಿನಿಗೆ ಶೇ 92
ಭಟ್ಕಳ : ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಅಕ್ಟೋಬರ್ ನಲ್ಲಿ ನಡೆಸಿದ್ದ ಪದವಿ ಕಾಲೇಜಿನ 6 ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಇಲ್ಲಿನ ಅಂಜುಮನ್ ಹಾಮಿಯೇ ಮಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಕಲಾ ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕ ಕೇಂದ್ರದ ಉತ್ತಮ ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದಲ್ಲಿ 32 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 19 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತೇರ್ಗೆಡೆ ಹೊಂದಿದ್ದಾರೆ. ಈ ವಿಭಾಗದಲ್ಲಿ ಯಶಸ್ವಿನಿ ನಾಯ್ಕ ಶೇ92, ಫೆಲ್ಸಿ ಸೇವರ್ ಡಿಸೋಜಾ ಶೇ 90 ಹಾಗೂ ರೋಹಿತ್ ನಾಯ್ಕ ಶೇ 84 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಅಂಜುಮನ್ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ ಪದವಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಯಶಸ್ವಿನಿಗೆ ಶೇ 92
ವಾಣಿಜ್ಯ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ 9 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ವಿಭಾಗದಲ್ಲಿ ಮೂಸಾ ಸಿದ್ದಿಬಾಪ ಶೇ 96. ಅಹ್ಮದ್ ಫಿರಾಸ್ ಶೇ 95 ಹಾಗೂ ಝೀಶಾನ್ ಅಹ್ಮದ್ ಡಾಂಗಿ ಶೇ 90 ಅಂಕಗಳನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲ ಮುಷ್ತಾಖ್ ಆಹ್ಮದ್ ಶೇಖ್, ಉಪನ್ಯಾಸಕ ವರ್ಗ ಹಾಗೂ ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದೆ.
Leave a Comment