ಫೆಸಿಲಿಟೇಟರ್ ಹುದ್ದೆಗೆ ಅರ್ಜಿ ಆಹ್ವಾನ;
ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿ ದೇಶಿ (ಕೃಷಿ ಪರಿಕರ, ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್) ಯೋಜನೆಯಡಿಯಲ್ಲಿ ಫೆಸಿಲಿಟೇಟರ್ ಹುದ್ದೆಯನ್ನು ಒಂದು ವರ್ಷ ಅವಧಿಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನ.30ರ ಮುಂಜಾನೆ 10 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ
ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ಸೂಚಿಸಿದ್ದಾರೆ. ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕರು
Leave a Comment