ಆರತಿಬೈಲ್ ಬಳಿ ಹೊತ್ತುರಿದ ಲಾರಿ ; ಬೆಂಕಿನಂದಿಸುವಲ್ಲಿಅಗ್ನಿಶಾಮಕದಳಯಶಸ್ವಿ

ಯಲ್ಲಾಪುರ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಆರತಿಬೈಲ್ ಬಳಿ ಕಬ್ಬಿಣದ ಸರಕು ಸಾಗಿಸುತ್ತಿದ್ದ ಲಾರಿಯೊಂದು ಹೊತ್ತು ಉರಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಬುಧವಾರ ರಾತ್ರಿ 3 ಗಂಟೆ ಸುಮಾರಿಗೆ ಮಂಗಳೂರಿಗೆ ಕಬ್ಬಿಣದ ರಾಡ್ ಹೊತ್ತೊಯ್ಯುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಕಗ್ಗತ್ತಿಲಿನಲ್ಲೇ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Leave a Comment