• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಕಾರ್ಮಿಕ ಸಚಿವರಿಗೆ ಧನ್ಯವಾದ

November 27, 2022 by Jayaraj Govi Leave a Comment

ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಕಾರ್ಮಿಕ ಸಚಿವರಿಗೆ ಧನ್ಯವಾದ

IMG 20221125 WA0145

ಯಲ್ಲಾಪುರ : ಬೆಂಗಳೂರು:
ಶಿವಮೊಗ್ಗ ಜಿಲ್ಲೆ ಸಾಗರದ
ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ ಸರ್ಕಾರ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದೆ.

ಪತ್ರಿಕೆ ಹಂಚುವ ಸಂದರ್ಭದಲ್ಲಿ ದಿನಾಂಕ 2.7.22 ರಂದು ಬೆಳಿಗ್ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷರಾದ ಶಿವಾನಂದ ತಗಡೂರು ಅವರು
ಸರ್ಕಾರದ ಗಮನಕ್ಕೆ ತಂದಿದ್ದರು.

ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಕಾರ್ಮಿಕ ಸಚಿವರಿಗೆ ಧನ್ಯವಾದ


ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮತ್ತು ಕೆಯುಡಬ್ಲ್ಯೂಜೆಯ ಶಿವಮೊಗ್ಗದ ಜಿಲ್ಲಾ ಘಟಕವು ಈ ಬಗ್ಗೆ ಮನವಿ ಮಾಡಿಕೊಂಡಿತ್ತು.

ಸುದ್ದಿ ಮನೆಯ ಕೊಂಡಿಯಾಗಿ ಕೆಲಸ ಮಾಡುವ ಪತ್ರಿಕಾ ವಿತರಕರ ಕುಟುಂಬಕ್ಕೆ ಪರಿಹಾರ ಕೊಡುವಂತೆ ಮುಖ್ಯಮಂತ್ರಿ ಮತ್ತು ಕಾರ್ಮಿಕ ಸಚಿವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ಅವರ ನೇತೃತ್ವದ ನಿಯೋಗ ಒತ್ತಾಯಿಸಿದ್ದರು.

ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಕಾರ್ಮಿಕ ಸಚಿವರಿಗೆ ಧನ್ಯವಾದ

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಕೆಯುಡಬ್ಲ್ಯೂಜೆ ಅಧ್ಯಕ್ಷರು ಮತ್ತು ಪತ್ರಿಕಾ ವಿತರಕರ ಸಂಘದ ಜೊತೆಗೆ ಹಲವು ಬಾರಿ ಸಭೆ ನಡೆಸಿ ಅಂತಿಮವಾಗಿ
ಅಸಂಘಟಿತ ವಲಯದಲ್ಲಿ ವಿತರಕರನ್ನು ಪರಿಗಣಿಸಿ ಪರಿಹಾರ ಕೊಡಲು ಮಹತ್ವದ ನಿರ್ಣಯ ತೆಗೆದುಕೊಂಡಿದ್ದರು. ಅಲ್ಲದೇ, ಆ ದಿನವೇ
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ, ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಕೊಡುವಂತೆ ಆದೇಶಿಸಿದ್ದರು.

ಸರ್ಕಾರ ಮಂಜೂರು ಮಾಡಿದ ಪರಿಹಾರ ಗಣೇಶ್ ಅವರ ಕುಟುಂಬದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಆಗಿದೆ ಎಂದು ಸಾಗರದ ವಿತರಕರು ಖಚಿತಪಡಿಸಿದ್ದಾರೆ.

ವಿತರಕರ ಸಮಸ್ಯೆಗೆ ಸ್ಪಂದಿಸುವ ಮೂಲಕ ಪರಿಹಾರ ಬಿಡುಗಡೆ ಮಾಡಿದ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮತ್ತು ಈ ನಿಟ್ಟಿನಲ್ಲಿ ಸತತವಾಗಿ ನಮ್ಮೊಂದಿಗೆ ಸಾಥ್ ನೀಡಿ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿದ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ.ಶಂಭುಲಿಂಗ‌, ಉತ್ತರ ಕನ್ನಡ ಪತ್ರಿಕಾ ವಿತರಕರ ಜಿಲ್ಲಾಧ್ಯಕ್ಷ ಜಯರಾಜ ಗೋವಿ ಅವರು ಸಮಸ್ತ ವಿತರಕರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಡಿ 26 ಮತ್ತು 27 ರಂದು 36 ನೇ ವರ್ಷದ ಸಂಕಲ್ಪ ಉತ್ಸವ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...