ರಾಷ್ಟ್ರೀಯ ಏಕೀಕರಣ ಶಿಬಿರದಲ್ಲಿಯಕ್ಷಗಾನ ನೃತ್ಯ ಪ್ರದರ್ಶಿಸಿದ ದೀಪಕ ಭಟ್ಟ ಕುಂಕಿ
ಯಲ್ಲಾಪುರ:
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ದೀಪಕ ಭಟ್ಟ ಕುಂಕಿ ಬೆಂಗಳೂರಿನ ರೇವಾ ಯುನಿವರ್ಸಿಟಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಏಕೀಕರಣ ಶಿಬಿರದಲ್ಲಿಯಕ್ಷಗಾನ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.
ರೇವಾ ಯುನಿವರ್ಸಿಟಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್ಎಸ್ಎಸ್ ರಾಷ್ಟ್ರೀಯ ನಿರ್ದೇಶನಾಲಯ ಇವರ ಸಹಯೋಗದಲ್ಲಿ ರಾಷ್ಟ್ರೀಯ ಏಕೀಕರಣ ಶಿಬಿರ ನಡೆಯುತ್ತಿದ್ದು, ದೇಶದ ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ದೀಪಕ ಭಟ್ಟ ಅವರು ಯಕ್ಷನೃತ್ಯದ ಮೂಲಕ ಶಿಬಿರಾರ್ಥಿಗಳಿಗೆ ಕರ್ನಾಟಕದ ವಿಶಿಷ್ಟ ಕಲೆಯಾದ ಯಕ್ಷಗಾನವನ್ನು ಪರಿಚಯಿಸಿ, ಮೆಚ್ಚುಗೆಗೆ ಪಾತ್ರರಾದರು.
ಇದೇ ವೇಳೆ ಯಕ್ಷಗಾನ ಕಲೆ, ಅದರ ವಿಶೇಷತೆಯ ಬಗೆಗೂ ವಿವರಿಸಿದರು.
ಈ ಶಿಬಿರದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿರುವ ದೀಪಕ, ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಯಕ್ಷಗಾನದಲ್ಲಿ ಪ್ರತಿಭಾವಂತ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದಾರೆ.
Leave a Comment