ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಬಿಇಡಿ, ಡಿಇಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿಯನ್ನು ಆಹ್ವಾನಿಸಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವೆಂದು ತಿಳಿಸಲಾಗಿತ್ತು. ಆದರೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು;
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು sevasindhu.karnataka.gov.in, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಟ್ವಿಟರ್ ಐಡಿ @MWDUKannada ಅಥವಾ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ ಅಥವಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382- 220 336, 82777 99990ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment