ಮೊಬೈಲ್ ಸರ್ವಿಸಿಂಗ್ ತರಬೇತಿ ಅರ್ಜಿ ಆಹ್ವಾನ
ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿAದ 45 ದಿನಗಳ ಮೊಬೈಲ್ ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 10 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ – ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗಧವರಿಗೆ ಮೊದಲು ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿAಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ವಿಳಾಸಕ್ಕೆ ಅಥವಾ ಸಂಸ್ಥೆಯ ಮೊಬೈಲ್ ಸಂಖ್ಯೆ : 94821 88780, 94834 85489 ಗೆ ಸಂಪರ್ಕಿಸಬಹುದಾಗಿದೆ.
Leave a Comment