ಫ್ರಿಡ್ಜ್, ಎಸಿ ತರಬೇತಿ ಅರ್ಜಿ ಆಹ್ವಾನ
ಕಾರವಾರ : ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಮತ್ತು ಜೆಸಿಬಿ ಇಂಡಿಯಾ ಜಂಟಿ ಸಹಯೋಗದಲ್ಲಿ 30 ದಿನಗಳ ರೆಫ್ರಿಜರೇಶನ್ ಮತ್ತು ಏರ್ ಕಂಡೀಶನ್ ದುರಸ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ – ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 31 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿAಗ್ ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ : 08284 – 298547, 94497 82425 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Leave a Comment