ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿ
ಹೊನ್ನಾವರ : ನಾಳೆ ಗುರುವಾರ ದಿ.16ರಂದು ಮಧ್ಯಾಹ್ನ 4 ಗಂಟೆಗೆ ಹಳದೀಪುರದ ಶ್ರೀ ಗೋಪಿನಾಥ ದೇವಸ್ಥಾನದ ಸಭಾಭವನಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ ನೇತ್ರತ್ವದ “ಕರಾವಳಿ ಪ್ರಜಾಧ್ವನಿ” ಯಾತ್ರೆ ಆಗಮಿಸಲಿದೆಯಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ತಿಳಿಸಿದ್ದಾರೆ.

ಅವರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಉತ್ತರ ಕನ್ನಡ ಜಿಲ್ಲಾ ಪ್ರಜಾಧ್ವನಿ ಕಾರ್ಯಕ್ರಮದ ಸಂಯೋಜಕರಾದ ನಿವೇದಿತ್ ಆಳ್ವಾ, ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವಕರ್ ಹಾಗೂ ಇನ್ನೂ ಹಲವಾರು ಮುಖಂಡರು ಆಗಮಿಸಿ, ಕಾರ್ಯಕ್ರಮವನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ.
ಕಾರಣ ಪಕ್ಷದ ಅಭಿಮಾನಿಗಳು,ಕಾರ್ಯಕರ್ತರು,ಮುಖಂಡರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಜಾಧ್ವನಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.
Leave a Comment