ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 2023
ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳ ಮಾ 18 ರ ಒಳಗೆ ಆಫ್ ಲೈನ್ ಅರ್ಜಿಯನ್ನು ಸಲ್ಲಿಸಬಹುದು. ವ್ಯಯೋಮಿತಿ 19 ರಿಂದ 35 ವರ್ಷ ಒಳಗಿರಬೇಕು, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ ಯು ಸಿ ತೇರ್ಗಡೆ ಹೊಂದಿರಬೇಕು ಮತ್ತು ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸಸಿರಬೇಕು. ಅಭ್ಯಾಸಸಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್. ಎಸ್.ಎಲ್.ಸಿ. ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment