ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023
ಹೊನ್ನಾವರ : ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾರವರ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ್ದ ಸಂದರ್ಭದಲ್ಲಿ, ಡಿ.ಕೆ.ಶಿವಕುಮಾರ್ ಸಮೀಪದ ಇಡುಗುಂಜಿಗೆ ತೆರಳಿ ಶ್ರೀ ವಿನಾಯಕ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಶಾಸಕ ಮಂಕಾಳ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ, ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೃಷ್ಣ ಗೌಡ ಇನ್ನಿತರರೂ ಉಪಸ್ಥಿತರಿದ್ದರು.
Leave a Comment