ರೈತರ ಮಕ್ಕಳಿಂದ ಅರ್ಜಿ ಆಹ್ವಾನ
ಕಾರವಾರ: ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳವರೆಗೆ ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಎಸ್ಎಸ್ಎಲ್ಸಿ ಪಾಸಾಗಿರಬೇಕು. ತಂದೆ-ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ನೀಡಿರಬೇಕು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು 18 ರಿಂದ 33 ಹಾಗೂ ಇತರೆ ಅಭ್ಯರ್ಥಿಗಳು 18 ರಿಂದ 30 ವಯೋಮಾನದವರಾಗಿರಬೇಕು.
ಆಸಕ್ತರು ಅರ್ಜಿ ನಮೂನೆಯನ್ನು ಇಲಾಖೆ ವೆಬ್ ಸೈಟ್: https:// horticulturedir.karnataka.gov.in ಅಥವಾ ತೋಟಗಾರಿಕೆ ಇಲಾಖೆಗಳಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಮೇ 22ರೊಳಗೆ ತರಬೇತಿ ಕೇಂದ್ರ, ಹೊಸರು, ಸಿದ್ದಾಪುರ ಅಥವಾ ಸಂಬಂಧಿಸಿದ ತೋಟಗಾರಿಕೆ ಇಲಾಖೆಗೆ ಸಲ್ಲಿಸಬೇಕು.
ಮೇ 25ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ- ಖ್ಯೆ: 08384-226427 ಗೆ ಸಂಪರ್ಕಿಸಿ ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment