ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಸಂಭ್ರಮಾಚರಣೆ
ಹೊನ್ನಾವರ : ರಾಜ್ಯದಲ್ಲಿ ಶನಿವಾರ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ನೇತ್ರತ್ವದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ಕಾಂಗ್ರೆಸ್ ಸರಕಾರದ ಪರ ಜಯಕಾರ ಹಾಕುತ್ತಾ, ನಗರದ ಶರಾವತಿ ಸರ್ಕಲ್ ಬಳಿ ಆಗಮಿಸಿ, ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಇಂದು ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಂಭ್ರಮದ ದಿನ. ಹಿಂದಿನ 40% ಪರ್ಸೆಂಟ್ ಕಮಿಶನ್ ದಂದೆಯ ಬಿ.ಜೆ.ಪಿ. ಸರಕಾರವನ್ನು ರಾಜ್ಯದ ಜನತೆ ಕಿತ್ತೆಸೆದು, 135 ಸಂಖ್ಯೆಯ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನಡೆಸಲು ಅಧಿಕಾರ ನೀಡಿದ ಸುದಿನ.
ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಸಂಭ್ರಮಾಚರಣೆ
ಮುಂದಿನ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತ್ರತ್ವದಲ್ಲಿ ಕಾಂಗ್ರೆಸ್ ಜನಪರ ಆಡಳಿತ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲಾ ಎಂದರು. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಕಾಂಗ್ರೆಸ್ ಜನತೆಗೆ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸುವ ಬರವಸೆ ನಾಡಿನ ಜನತೆಗೆ ಇದೆ ಎಂದರು.
ನೂತನ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಸಂಭ್ರಮಾಚರಣೆ
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಾಮೋದರ ನಾಯ್ಕ, ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಕೆ.ಎಚ್.ಗೌಡ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಕ್ರಿಯ್ಯಾ ಶೇಖ, ಸೇವಾದಳದ ಅಧ್ಯಕ್ಷ ಮೋಹನ ಆಚಾರಿ, ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಮೇಸ್ತ, ಕಾರ್ಯದರ್ಶಿ ಸುರೇಶ ಮೇಸ್ತ, ಪಕ್ಷದ ಹಿರಿಯ ಮುಖಂಡರಾದ ಸುರೇಶ ರುಕ್ಕು ಮೇಸ್ತ, ಬಾಲಚಂದ್ರ ನಾಯ್ಕ, ಹನೀಫ್ ಶೇಖ, ಮನ್ಸೂರ್ ಸೈಯದ್, ವಸಿಂ ಶೇಖ, ಮಾದೇವ ನಾಯ್ಕ ಕರ್ಕಿ, ಬ್ರಾಝಿಲ್ ಪಿಂಟೊ, ನಾಗೇಶ ನಾಯ್ಕ, ಮಂಜು ಮುಕ್ರಿ, ಮೋಹನ ಮೇಸ್ತ, ಹರೀಶ ಮೇಸ್ತ, ಜನಾರ್ಧನ ನಾಯ್ಕ, ಮಂಜು ಮುಕ್ರಿ, ನಾರಾಯಣ ಮಹಾಲೆ, ಜೊಸೇಪ್ ಡಿಸೋಜಾ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
Leave a Comment