ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 2023
2023-24ನೇ ಸಾಲಿಗೆ ಒಂದು ವರ್ಷದ ರಂಗ ಶಿಕ್ಷಣ ತರಬೇತಿ (ಡಿಪ್ಲೋಮಾ)ಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವದರ ಜೊತೆಗೆ ಮಾಹೆಯಾನ 5,000 ರೂ.ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.
ರಂಗತರಬೇತಿ ಕೋರ್ಸ್ಗೆ ಸೇರಬಯಸುವ ಅಭ್ಯರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18ರಿಂದ 28 ವರ್ಷದೂಳಗಿನವರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು.
ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 2023
ಆಸಕ್ತ ಅಭ್ಯರ್ಥಿಗಳು ರಂಗಾಯಣ http://rangayanamysore. karnataka.gov.in ವೆಬ್ಸೈಟ್ದಿಂದ ನಿಗದಿತ ಅರ್ಜಿಯನ್ನು ಅಥವಾ ಡೌನ್ಲೋಡ್ ಮಾಡಿಕೊಂಡು ರಂಗಾಯಣದ ಕಚೇರಿಯಲ್ಲಿ ಕೆಲಸದ ದಿನಗಳ ಕಚೇರಿ ಅವಧಿಯಲ್ಲಿ ಖುದ್ದಾಗಿ ಅರ್ಜಿಯನ್ನು ಪಡೆದು ಜೂ.5ರ ಸಂಜೆ 5.30ರೂಳಗೆ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230, ಪ.ಜಾ, ಪ. ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180, ರಂಗ ಕೈಪಿಡಿ ಶುಲ್ಕ ರೂ.30 ಒಳಗೊಂಡತೆ ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣ ವಿಳಾಸಕ್ಕೆ ಜೂನ್.05 ರ ಸಂಜೆ 5.30 ಗಂಟೆಯೊಳಗಾಗಿ ಉಪನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣ ವಿಳಾಸಕ್ಕೆ ಅಂಚೆಯ ಮೂಲಕ ಕಳಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2512639, 9448938661, 9148827720, 8867514311
web site ; https://rangayanamysore.karnataka.gov.in/
Leave a Comment