ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1,2ಎ,2ಬಿ,3ಎ,3ಬಿ, ಪ. ಜಾ ಹಾಗೂ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಜೂನ್ 15ರ ಒಳಗಾಗಿ https://shp.karnataka.gov.in/ ನ ಮೂಲಕ ಅರ್ಜಿ ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ www.bcwd.karnataka.gov. in ನಲ್ಲಿ ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382- 226589 ಗೆ ಸಂಪರ್ಕಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment