ವೈಜ್ಞಾನಿಕ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಧಾರವಾಡದಲ್ಲಿ ಜೂನ್ ಹಾಗೂ ಜುಲೈನಲ್ಲಿ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳ ರೈತ ರೈತ ಮಹಿಳೆಯರಿಗೆ ಎರಡು ದಿನಗಳ ಕಾಲ ತಂಡವಾರು ಉಚಿತವಾಗಿ ಕುರಿ, ಮೇಕೆ ವೈಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತರು ತಮ್ಮ ಹೆಸರನ್ನು ಫೋನ್ ಮೂಲಕ ವಿವರ ನೀಡಿ ಅಥವಾ ಕಚೇರಿಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 5023 0836-2443743, 9591024499, 8618022108 ಗೆ ಸಂಪರ್ಕಿಸಿ ಎಂದು ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.
Leave a Comment