ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ 2023 Ggruhalakshmi yojana guidelines
ಗೃಹಲಕ್ಷ್ಮಿಯೋಜನೆಯಡಿ ಪ್ರತೀ ಮನೆಯ ಯಜಮಾನಿಗೆ ಮಾಸಿಕ 2000 ರೂ. ಹಣ ಸಿಗಲಿದೆ.ಅಲ್ಲದೆ ಅರ್ಜಿ ಸಲ್ಲಿಸಲು ಯಾವ ದಾಖಲಾತಿ ಅಗತ್ಯವಿದೆ.ಯಾವೆಲ್ಲಾನಿಯಮಗಳಿವೆ ಎಂಬುದನ್ನವಿವರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳಗೆ ಪ್ರತಿ ತಿಂಗಳು ರೂ.2000/- ಗಳನ್ನು DBT ಮೂಲಕ ನೀಡುವ ಯೋಜನೆಯಾಗಿರುತ್ತದೆ.
ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ. ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ.
ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24ನೇ ಸಾಲಿನಲ್ಲಿ ಅನುಷ್ಮಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು:
• ಅರ್ಜಿದಾರರು 18-6-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
• ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದ.
(https://sevasindhugs.karnataka.gov.in/gruhalakshmi)
• ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ
• ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
- ಮಂಜೂರಾತಿಯ ನಂತರ DBT ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುವುದು.
- • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಸಂಪೂರ್ಣ ಉಚಿತವಾಗಿರುತ್ತದೆ.
• ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ: ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
• ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.
ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ,
ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.
Leave a Comment