ಹೈ ವೇವ್ ಅಲರ್ಟ್ ಘೋಷಣೆ 2023
ಭಾರತೀಯ ಹವಾಮಾನ ಇಲಾಖೆ ಮತ್ತು ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ವ್ಯವಸ್ಥೆ ಕೇಂದ್ರ (ಇನ್‌ಕಾಯ್ಸ್) ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಸ್ ಚಂಡಮಾರುತವು ಹಾದು ಹೋದ ಹಿನ್ನೆಲೆಯಲ್ಲಿ ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು ಸಮುದ್ರದ ಅಲೆಗಳ ಎತ್ತರ 3ರಿಂದ 4 ಮೀ.ನಷ್ಟು ಇರಲಿದ್ದು, ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ, ಅಂದರೆ ಜೂನ್ 19ರವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ.
ಅಲ್ಲದೇ ಸಮುದ್ರದ ತೀರದದಲ್ಲಿ ಓಡಾಡುವುದು ಮತ್ತು ಆಟವಾಡುವುದು ಕೂಡಾ ಅಪಾಯಕಾರಿಯಾಗಿರುತ್ತದೆ.
ಜಿಲ್ಲೆಯ ಎಲ್ಲಾ ತಾಲೂಕಿನ ತುರ್ತು ನಿರ್ವಹಣಾ ಕೇಂದ್ರವನ್ನು ತೆರೆಯಲಾಗಿದ್ದು, ಉತ್ತರ ಕನ್ನಡ ಜಿಲ್ಲಾ ಕಂಟ್ರೋಲ್ ರೂಮ್ 08382-229857/1077, 94835 11015ಗೆ ತುರ್ತು ಸಂದರ್ಭದಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿ ಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment