ಇ-ಕೆವೈಸಿ ಮಾಡಿಕೊಳ್ಳಲು ರೈತರಿಗೆ ಸೂಚನೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ 14ನೇ ಕಂತಿನ ಆರ್ಥಿಕ ನೆರವು ಬಿಡುಗಡೆ ಆಗಲಿದ್ದು, ಇ- ಕೆವೈಸಿ ಮಾಡಿಸದೆ ಇರುವ ರೈತರು ತಕ್ಷಣ ಇ- ಕೆವೈಸಿ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಒನ್ ಮತ್ತು ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ) ಜನಸೇವಾ ಕೇಂದ್ರಗಳಲ್ಲಿ ಇಕೆವೈಸಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಭೇಟಿಯಾಗಬೇಕು ಎಂದು ಅವರು ತಿಳಿಸಿದ್ದಾರೆ.
Leave a Comment