• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ

June 25, 2023 by Sachin Hegde Leave a Comment

Table of Contents

Toggle
  • ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ
    • Share this:
    • Related News:

ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ

ಭಟ್ಕಳ: ತಾಲೂಕಾ ಆಸ್ಪತ್ರೆಯಲ್ಲಿ ದಾಖಲಾದ ಒಳರೋಗಿಗಳಿಗೆ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನ, ರಾತ್ರಿ ಊಟ ನೀಡುವ ವ್ಯವಸ್ಥೆಗೆ ಶನಿವಾರ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಸರಕಾರಿ ಆಸ್ಪತ್ರೆಗೆ ಬಡವರೇ ಹೆಚ್ಚು ಬರುತ್ತಿದ್ದು, ಒಳರೋಗಿಯಾಗಿ ದಾಖಲಾದವರಿಗೆ ಅನುಕೂಲವಾಗಲು ಉಚಿತವಾಗಿ ಊಟ, ಉಪಾಹಾರ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಹೊನ್ನಾವರದಲ್ಲಿ ಈಗಾಗಲೇ ರೋಗಿಗಳಿಗೆ ಊಟ, ಉಪಾಹಾರ ನೀಡಲು ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆಯಲ್ಲೂ ಒಳರೋಗಿಗಳಿಗೆ ಉಚಿತವಾಗಿ ಊಟೋಪಾಹಾರ ಸಿಗುವಂತಾಗಬೇಕು.

ಇದರಲ್ಲಿ ಯಾವುದೇ ರಾಜಕೀಯ ಮಾಡುವುದು ಸರಿಯಲ್ಲ. ಗುಣಮಟ್ಟದ ಆಹಾರವನ್ನು ಯಾರು ವಿತರಿಸುತ್ತಾರೋ ಮುಂದಿನ ದಿನಗಳಲ್ಲಿ ಅವರಿಗೆ ಟೆಂಡರ್ ಕೊಡಲು ಸಹ ಸೂಚಿಸಲಾಗಿದೆ ಎಂದ ಅವರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದವರಿಗೆ ಹೊರಗಿನಿಂದ ಔಷಧಿ ತರಲು ಚೀಟಿ ಕೊಡಬಾರದು. ಸರಕಾರಿ ಆಸ್ಪತ್ರೆಗೆ ಹೆಚ್ಚು ಬಡವರೇ ಬರುತ್ತಾರೆ. ಅಂತಹವರಿಗೆ ಹೊರಗಿನಿಂದ ಔಷಧ ತರುವಂತೆ ಚೀಟಿ ಕೊಟ್ಟರೆ ಅವರಿಗೆ ಕಷ್ಟವಾಗಲಿದೆ. ಹೀಗಾಗಿ ಯಾವುದೇ ವೈದ್ಯರು ರೋಗಿಗಳಿಗೆ ಹೊರಗಿನಿಂದ ಔಷಧ ತರುವಂತೆ

ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ

ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ

ಚೀಟಿ ಕೊಡಬಾರದು. ಸರಕಾರಿ ಆಸ್ಪತ್ರೆಯಲ್ಲಿನ ಔಷಧಿಯೇ ಕೊಡುವಂತಾಗಬೇಕು. ಸರಕಾರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲ ಸೌಲಭ್ಯ ವಿತರಿಸಲು ಸಿದ್ಧವಿದೆ ಎಂದರು.

ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ವ್ಯವಸ್ಥೆಗಳಿದ್ದರೂ ಲ್ಯಾಬ್ ಟೆಕ್ನಿಷಿಯನ್ ಇಲ್ಲ. ಇದರಿಂದ ಬಡರೋಗಿಗಳಿಗೆ ರಕ್ತ ತಪಾಸಣೆಗೆ ತೊಂದರೆಯಾಗುತ್ತಿದೆ ಎಂದು ಡಾ. ಸವಿತಾ ಕಾಮತ್ ಸಚಿವರ ಗಮನಕ್ಕೆ ತಂದಾಗ ಸಚಿವರು ಸ್ಥಳಂದಿಲೇ ಡಿಹೆಚ್‌ ಓಗೆ ಕರೆ ಮಾಡಿ ಭಟ್ಕಳ ಸರಕಾರಿ ಆಸ್ಪತ್ರೆಗೆ ಲ್ಯಾಬ್ ಟೆಕ್ನಿಷಿಯನ್ ಹುದ್ದೆ ಭರ್ತಿಗೊಳಿಸುವಂತೆ ಸೂಚಿಸಿದರು. ಡಾ. ಲಕ್ಷ್ಮೀಶ ನಾಯ್ಕ, ಡಾ. ಸತೀಶ, ಡಾ. ಸುರಕ್ಷಿತ ಶೆಟ್ಟಿ, ಡಾ. ಕಮಲಾ ನಾಯಕ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ

ಹಿಂದೆಯೂ ಆಸ್ಪತ್ರೆಯಲ್ಲಿ ಉಚಿತ ಊಟ ಮತ್ತು ಉಪಾಹಾರ ನೀಡಲಾಗುತ್ತಿತ್ತು. ಆದರೆ ಕಾರಣಾಂತರದಿಂದ ಅದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸಚಿವ ಮಂಕಾಳ ವೈದ್ಯ ಅವರು ಬಳಿ ಚರ್ಚಿಸಿ ಅವರ ಸೂಚನೆಯಂತೆ ರೋಗಿಗಳಿಗೆ ಊಟ, ಉಪಾಹಾರ ನೀಡಲು ಚಾಲನೆ ನೀಡಲಾಗಿದೆ.

—ಡಾ. ಸವಿತಾ ಕಾಮತ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ

ಗೃಹಲಕ್ಷ್ಮೀ ಯೋಜನೆಗೆ  27ರಿಂದ ಅರ್ಜಿ ಸಲ್ಲಿಕೆ ಆರಂಭ
ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ 2023

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಉಚಿತ ಊಟೋಪಾಹಾರ ವ್ಯವಸ್ಥೆ ಭಟ್ಕಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳರಿಂದ ಚಾಲನೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...