ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ
ಹೊನ್ನಾವರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಾಡಿನ ಜನಸಾಮಾನ್ಯರಲ್ಲಿ ಸಂತಸ ತಂದಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ಏಳು ಕೋಟಿ ಕನ್ನಡಿಗರಿಗೆ ನೀಡಿದ ಐದು ಗ್ಯಾರಂಟಿಗಳಾದ ಶಕ್ತಿ, ಗೃಹಲಕ್ಷಿö್ಮ, ಗೃಹ ಜ್ಯೋತಿ, ಯುವ ನಿಧಿಗಳಿಗೆ ಬಜೆಟ್‌ನಲ್ಲಿ ಅನುದಾನ ಒದಗಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ ಎಂದು ತೆಂಗೇರಿ ಹೇಳಿದ್ದಾರೆ.
ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನಲುಗಿದ ಶ್ರೀಸಾಮಾನ್ಯನ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆಗೆ ಬಜೆಟ್‌ನಲ್ಲಿ ಅನುದಾನ ನೀಡುವ ಮೂಲಕ ಜಿಲ್ಲೆಯ ಜನತೆಯ ಪ್ರೀತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಹೇಳಿದ್ದಾರೆ.
Leave a Comment