ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ
ಬೆಂಗಳೂರು: ಅರಣ್ಯ ಭೂಮಿಯನ್ನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುತ್ತೇವೆ ಎಂದು ಅರಣ್ಯ ಸಚಿವ ಈಶ್ವ ಖಂಡ್ರೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ಸದಸ್ಯ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಅರಣ್ಯಭೂಮಿಯನ್ನು ಹಲವು ಪ್ರಭಾವಿಗಳು ಕಾನೂನು ಬಾಹಿರವಾಗಿ ವಶಪಡಿಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ.
ಯಾರು ಎಷ್ಟೇ ಪ್ರಭಾವಿಗಳಿರಲಿ ತೆರವು ಕಾರ್ಯ ಮಾಡಿಯೇ ತೀರುತ್ತೇವೆ. ಸರ್ಕಾರ ಕೈ ಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. 704 ಪ್ರಕರಣಗಳಲ್ಲಿ 2184 ಅರಣ್ಯ ಭೂಮಿಯನ್ನು ತೆರವುಗೊಳಿಸಲಾಗಿದೆ.
2013 ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿವೆ. 1051 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, 399 ಪ್ರಕರಣಗಳಿಗೆ ತಡೆಯಾಜ್ಞೆ ನೀಡಲಾಗಿದೆ.
ತಡೆಯಾಜ್ಞೆಯನ್ನು ತೆರವುಗೊಳಿಸಲು ಇಲಾಖಾ ಮಟ್ಟದಲ್ಲಿ ವಿಶೇಷ ಕಾನೂನು ಘಟಕವನ್ನು ತೆರೆಯಲಾಗುತ್ತಿದೆ. ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡರೆ ಸರ್ಕಾರ ಸುಮ್ಮನಿರುವುದಿಲ್ಲ ಎಂದಿದ್ದಾರೆ.
Leave a Comment