Sslc ಪೂರೈಸಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ
ಜಿಲ್ಲಾ ಕೇಂದ್ರ ಗ್ರಂಥಾಲಯವು ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದ ಕೇರ್-ಟೇಕ 01 ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಎಸ್ ಎಸ್ ಎಲ್ ಸಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರ ಇವರಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 10 ರ ಒಳಗಾಗಿ ಅಂಚೆಯ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾರವಾರ ನಗರಸಭೆ ವ್ಯಾಪ್ತಿಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಎಸ್ ಎಸ್ ಎಲ್ ಸಿಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಇಲಾಖೆಯನ್ನು ಸಂಪರ್ಕಿಸುವಂತೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://canarabuzz.com/jobs/sslc-puc-iti-jobs/
Leave a Comment