ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ನೋಂದಣಿ 20ರಿಂದ ಆರಂಭವಾಗಿದೆ.
ಅರ್ಹ ಫಲಾನುಭವಿಗಳು ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಸ್ಥಳೀಯ ನಗರಗಳಲ್ಲಿ ಪ್ರಾರಂಭಿಸಿರುವ ಕೇಂದ್ರಗಳಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಳ್ಳಬಹುದು.
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿಬಾರದು.
ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?gruha lakshmi scheme guidelines2023-24
ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 207- ಗ್ರಾಮ-ಒನ್ ಕೇಂದ್ರಗಳು, 229 ಬಾಪೂಜಿ ಸೇವಾ ಕೇಂದ್ರಗಳು, 21- ಕರ್ನಾಟಕ-ಒನ್ ಕೇಂದ್ರಗಳು, 31- ಸ್ಥಳೀಯ ನಗರ ಕೇಂದ್ರ ಪಾರಂಭಿಸಿದ್ದು ತಾಂತ್ರಿಕ ಸಿಬ್ಬಂದಿ ನೇಮಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಿಇಒ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಮೇಲ್ವಿಚಾರಕಿಯರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.
ಫಲಾನುಭವಿಯು ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ. ಮೊದಲನೆಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ
ನೋಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುವುದು.
ಗ್ರಾಮಾಂತರ ಪ್ರದೇಶದಲ್ಲಿ ಅವರು ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಕ್ಕೆ ತೆರಳಬೇಕು. ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕು.
ಪರ್ಯಾಯವಾಗಿ ಪ್ರಜಾಪ್ರತಿನಿಧಿ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ನೋಂದಾಯಿಸಿಕೊಳ್ಳಬಹುದು. ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬಗೆ ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?gruha lakshmi scheme guidelines2023-24
ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ್-ಒನ್/ ಬಾಪೂಜಿ ಕೇಂದ್ರ ಕರ್ನಾಟಕ-ಒನ್/ ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ ಕಾರ್ಡ್ ಸಂಖ್ಯೆ, ಪತಿಯ ಆಧಾರ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ ನಂಬರ್ ಜೋಡಣೆಯಾಗಿರುವ ಬ್ಯಾಂಕ್, ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ. ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ಎಲ್ಲ ಮಾಹಿತಿಗಳೊಂದಿಗೆ ಫಲಾನುಭವಿಗಳು ಕೇಂದ್ರಕ್ಕೆ ಹಾಜರಾಗಬೇಕು.
ಈಗಾಗಲೇ ಆಧಾರ ಜೋಡಣೆಯಾಗಿರುವ ಫಲಾನುಭವಿ ಖಾತೆಗೆ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಜಮಾ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಛಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದು. ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಳಿಕಟ್ಟಿ ತಿಳಿಸಿದ್ದಾರೆ.
Leave a Comment