ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನಕ್ಕಾಗಿ ನಿಗದಿತ ಸಮಯಕ್ಕೆ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಜು. 31ರವರೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಕಾಲಾವಕಾಶ ಕಲ್ಪಿಸಲಾಗಿದೆ.
ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ವಿದ್ಯಾರ್ಥಿ ವೇತನ ತಂತ್ರಾಂಶ www.tw.kar.nic.in ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9141004601 ಗೆ ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment