ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ 2023
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಮಂಜುಗಡ್ಡೆ ಸ್ಥಾವರ ನಿರ್ಮಾಣಕ್ಕೆ ಹಾಗೂ ಮಂಜುಗಡ್ಡೆ ಸ್ಥಾವರ ನವೀಕರಣಕ್ಕೆ ಸಹಾಯಧನ, ಕಡಲ ಚಿಪ್ಪು ಕೃಷಿಗೆ, ಸಾಂಪ್ರದಾಯಿಕ ಮತ್ತು ಯಾಂತ್ರೀಕೃತ ಮೀನುಗಾರಿಕಾ ಹಡಗುಗಳ ಮೀನುಗಾರರಿಗೆ ಸುರಕ್ಷತಾ ಕಿಟ್ಗಳಿಗೆ, ಶಾಖ ನಿರೋಧಕ ವಾಹನ ಖರೀದಿಗೆ, ಮೀನು ಕೃಷಿ ಕೊಳಗಳ ನಿರ್ಮಾಣಕ್ಕೆ, ಮೀನು ಕೃಷಿ ಕೊಳದ ಹೂಡಿಕೆ ವೆಚ್ಚಕ್ಕೆ, ಬಯೋಫ್ಲಾಕ್ ಘಟಕ ಸ್ಥಾಪನೆಗೆ, ಸಾಂಪ್ರದಾಯಿಕ ಮೀನುಗಾರರಿಗೆ ದೋಣಿಗಳು (ಮರದಿಂದ ಫೈಬರ್) ಬದಲಿ ವ್ಯವಸ್ಥೆ ಹಾಗೂ ಬಲೆಗಳನ್ನು ಒದಗಿಸುವುದಕ್ಕೆ, ಸಹಾಯಧನ ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ.
ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ 2023
ಈ ಯೋಜನೆಗಳಿಗೆ ಆಸಕ್ತ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆ.23 ಕೊನೆಯ ದಿನವಾಗಿದೆ. ಜಿಲ್ಲೆಯ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Leave a Comment